ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಆಘಾತಕಾರಿ ಘಟನೆ ನಡೆದಿದೆ.
ವೇಗವಾಗಿ ಚಲಿಸುತ್ತಿದ್ದಾಗ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಮಾಹಿತಿ ಅರಿತ ಕಾರಿನ ಚಾಲಕ ಮತ್ತು ಪ್ರಯಾಣಿಕರು ಹೆದ್ದಾರಿ ಮಧ್ಯೆಯೇ ಕೆಳಗಿಳಿದಿದ್ದಾರೆ . ಇದರಿಂದ ದೊಡ್ಡ ಅನಾಹುತ ತಪ್ಪಿದೆ.
ಬೆಂಕಿಯ ಕೆನ್ನಾಲಿಗೆ ಕಾರಿನ ಸಂಪೂರ್ಣ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರು ಬೆಂಕಿಗಾಹುತಿಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ . ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿದೆ.



