ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತುಮಕೂರಿನ ಕ್ಯಾತಸಂದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಲಾರಿ ಡಾಬಸ್ ಪೇಟೆಯಿಂದ ವಸಂತ ನರಸಾಪುರ ಕಡೆಗೆ ತೆರಳುತ್ತಿತ್ತು. ಈ ವೇಳೆ ಲಾರಿಯ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಲಾರಿಯನ್ನು ಬಿಟ್ಟು ಚಾಲಕ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಾರಿ ಖಾಲಿಯಿದ್ದ ಹಿನ್ನೆಲೆ ಘಟನೆಯಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ.