ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಖಾಸಗಿ ಆಸ್ಪತ್ರೆಯೊಂದರ ಮುಂಭಾಗದಲ್ಲಿರುವ ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿಹೊತ್ತಿಕೊಂಡು ಪರಿಣಾಮ, ಕೆಳಗೆ ನಿಲ್ಲಿಸಿದ್ದ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ.
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲೇ ಹಲವಾರು ದ್ವಿಚಕ್ರ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಗೌತಮ್ ಬುದ್ಧನಗರದ ಸಿಎಫ್‌ಒ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.