ಖಾಸಗಿ ಸಂಸ್ಥೆಯ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಬೆಂಕಿ: ನಾಲ್ವರು ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುಣೆ ಬಳಿ ಖಾಸಗಿ ಕಂಪನಿಯ ವಾಹನವೊಂದಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ, ವಾಹನದಲ್ಲಿ ಪ್ರಯಾಣಿಸುತ್ತಿದ್ದ ಕಂಪನಿಯ ನಾಲ್ವರು ಉದ್ಯೋಗಿಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.

ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಮಿನಿ ಬಸ್‌ನ ಹಿಂಭಾಗದಲ್ಲಿರುವ ತುರ್ತು ನಿರ್ಗಮನ ದ್ವಾರ ತೆರೆಯಲು ವಿಫಲವಾದ ಕಾರಣ ಮತ್ತು ಕೆಲವು ಉದ್ಯೋಗಿಗಳು ವಾಹನದೊಳಗೆ ಸಿಕ್ಕಿಹಾಕಿಕೊಂಡ ಕಾರಣ ಸಾವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.

ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಹಿಂಜೆವಾಡಿಯಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಮಿನಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ವರದಿಯ ಪ್ರಕಾರ ಕಂಪನಿಯ 12 ಉದ್ಯೋಗಿಗಳನ್ನು ವಾರ್ಜೆಯಿಂದ ಹಿಂಜೆವಾಡಿಯಲ್ಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ ವಾಹನವಾಗಿತ್ತು ಎನ್ನಲಾಗಿದೆ.

ಘಟನೆಯ ಪ್ರಾಥಮಿಕ ತನಿಖೆಯ ಫಲಿತಾಂಶಗಳನ್ನು ಪೊಲೀಸ್ ಅಧಿಕಾರಿ ಬಹಿರಂಗಪಡಿಸಿದ್ದು, ಹಿಂಭಾಗದ ನಿರ್ಗಮನ ಬಾಗಿಲು ತೆರೆಯದ ಕಾರಣ ಕೆಲವು ನೌಕರರು ತಮ್ಮನ್ನು ತಾವು ರಕ್ಷಿಸಲು ವಿಫಲರಾದರು. ಇದರ ಪರಿಣಾಮವಾಗಿ ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇತರ ಐದು ಉದ್ಯೋಗಿಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!