Sunday, December 10, 2023

Latest Posts

ಮನೆಯಲ್ಲಿ ಬೆಂಕಿ ಅವಘಡ: ಮೂವರು ಸಜೀವ ದಹನ, ಓರ್ವನ ಸ್ಥಿತಿ ಗಂಭೀರ

ಹೊಸದಿಗಂತ ವರದಿ ಶಿವಮೊಗ್ಗ:

ಆಕಸ್ಮಿಕವಾಗಿ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಜೀವ ದಹನವಾದ ಮನಕಲಕುವ ಘಟನೆಯೊಂದು ಭಾನುವಾರ ಬೆಳ್ಳಂಬೆಳಿಗ್ಗೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಹೊಸನಗರ ರಸ್ತೆಯ ಅರಳಸುರಳಿ ರೈಸ್ ಮಿಲ್ ಸಮೀಪ ಗಣಪತಿ ಕಟ್ಟೆ ಎದುರು ಕಲ್ಲೋಣಿಯ ರಾಘವೇಂದ್ರ. ಕೆ. ಕುಡ ಎಂಬುವವರ ಮನೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆ. ಕುಡ (63), ಪತ್ನಿ ನಾಗರತ್ನ (54), ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ ತಿಳಿದು ಬಂದಿದೆ. ಇನ್ನೋರ್ವ ಪುತ್ರ ಭರತ್ (30) ಗಂಭೀರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸೇರಿಸಲಾಗಿದೆ.

ಮನೆಯ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅರಳಸುರಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಅಗ್ನಿ ಅವಘಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಈ ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯಬೇಕಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್ ಸ್ಥಳಕ್ಕೆ ಧಾವಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!