ಹೈದರಾಬಾದ್‌ನ ಗಾಂಧಿನಗರದಲ್ಲಿ ಅಗ್ನಿ ಅವಘಡ:10ಲಕ್ಷಕ್ಕೂ ಅಧಿಕ ಮೌಲ್ಯದ ಆಸ್ತಿ ನಷ್ಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್‌ನ ಗಾಂಧಿನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಜಬ್ಬಾರ್ ಕಾಂಪ್ಲೆಕ್ಸ್ ಪಕ್ಕದಲ್ಲಿರುವ ಅಸೆಂಬಲ್ ವಾಟರ್ ಫಿಲ್ಟರ್ ಅಂಗಡಿಯಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೂ ವ್ಯಾಪಿಸಿತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಈ ಅವಘಡದಲ್ಲಿ ಸುಮಾರು 10 ಲಕ್ಷ ರೂಪಾಯಿ ಆಸ್ತಿ ಹಾನಿಯಾಗಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ ಎರಡು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ಹತೋಟಿಗೆ ತಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!