ಮಾಜಿ ಸಂಸದ ಅನಂತ್ ಕುಮಾರ್‌ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ.

ಇಂದು ಮುಂಜಾನೆ ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ‌ ಬೆಂಕಿ ಹೊತ್ತಿದ್ದು,  ಜಿಮ್ ಮಾಡುವ ಕೊಠಡಿಯಲ್ಲಿ ಮೊದಲು ಬೆಂಕಿ ಹೊತ್ತಿದೆ.

ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!