ಹೊತ್ತಿ ಉರಿದ ಸರ್ಕಾರಿ ಬಸ್‌: ಪ್ರಯಾಣಿಕರ ರಕ್ಷಿಸಲು ಚಾಲಕ ಏನ್‌ ಮಾಡಿದ್ರು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್‌ನಲ್ಲಿ ಟಿಎಸ್‌ಆರ್‌ಟಿಸಿ ರಾಜಧಾನಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ವಿಜಯವಾಡ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಕೂಡಲೇ ಎಚ್ಚೆತ್ತು ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.

ಬಸ್ಸಿನಲ್ಲಿದ್ದ ಎಸಿಯಿಂದ ಬೆಂಕಿ ಹೊತ್ತಿಕೊಂಡಿರುವುದಾಗಿ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿ 45 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಬಸ್ ಚಾಲಕನ ಜಾಗರೂಕತೆಯಿಂದ ಭಾರೀ ಅನಾಹುತ ತಪ್ಪಿತು. ಹೈದರಾಬಾದ್‌ನಿಂದ ಗುಂಟೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.

ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿಯನ್ನು ಹತೋಟಿಗೆ ತಂದರು. ಯಾವುದೇ ಪ್ರಾಣಹಾನಿ ಸಂಭವಿಸದ ಕಾರಣ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!