ಮಹಿಳಾ ಹಾಸ್ಟೆಲ್‌ನಲ್ಲಿ ಬೆಂಕಿ ಅವಘಡ: 30 ಮಂದಿ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಟಕ್‌ನ ಚಾಂಡಿ ಚೌಕ್ ಪ್ರದೇಶದಲ್ಲಿರುವ ಕಟ್ಟಡವೊಂದರ ಮಹಿಳಾ ಹಾಸ್ಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಸ್ತುತ ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ.

ಈ ಕುರಿತು ವರದಿಯನ್ನು ಸಲ್ಲಿಸುವವರೆಗೂ ಬೆಂಕಿಯ ಕಾರಣವನ್ನು ಕಂಡುಹಿಡಿಯಲು ಸಾಧ್ಯವಿಲ್ಲ. ಸದ್ಯ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.  ಚಾಂಡಿ ಛಕ್ ಪ್ರದೇಶದಲ್ಲಿರುವ ಹಾಸ್ಟೆಲ್‌ನ ಸುಮಾರು 30 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಇನ್ನೂ ಮಾರ್ಚ್ 15 ರಂದು ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಕೊಡೈಕೆನಾಲ್ ಬೆಟ್ಟಗಳ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕಾಡ್ಗಿಚ್ಚು ನಿಯಂತ್ರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಆಗಿದೆ.

ಭಾರತೀಯ ವಾಯುಪಡೆಯು ಕಾಡಿನ ಬೆಂಕಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿತು ಮತ್ತು ಪೀಡಿತ ಪ್ರದೇಶಗಳಲ್ಲಿ ನೀರನ್ನು ವಿತರಿಸಲು ಹೆಲಿಕಾಪ್ಟರ್‌ಗಳನ್ನು ಬಳಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!