ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯ ಎಂಜಿನಿಯರ್‌ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ರಾಜಧಾನಿ ಬಿಬಿಎಂಪಿ (BBMP) ಮುಖ್ಯ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯ ಎಂಜಿನಿಯರ್‌ ಶಿವಕುಮಾರ್‌ (Shivakumar) ನಿಧನರಾಗಿದ್ದಾರೆ.

ಗುಣ ನಿಯಂತ್ರಣ ವಿಭಾಗದದಲ್ಲಿ ಶಿವಕುಮಾರ್‌ ಅವರು ಮುಖ್ಯ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಂಕಿ ಅವಘಡದ ವೇಳೆ ಎಲ್ಲರನ್ನೂ ರಕ್ಷಿಸುವಾಗ ವಿಷಾನಿಲ ದೇಹದ ಶ್ವಾಸಕೋಶಕ್ಕೆ ಹೊಕ್ಕಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಕೆಲ ದಿನಗಳ ಹಿಂದೆ ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಹೊತ್ತಿ ಉರಿದ ಬೆಂಕಿಯಿಂದಾಗಿ 9 ಮಂದಿ ಬಿಬಿಎಂಪಿ ನೌಕರರಿಗೆ ತೀವ್ರ ಗಾಯಗಳಾಗಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!