September 28, 2026
Monday, September 28, 2026
spot_img

ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಂಕಿ ಅವಘಡ: ಟರ್ಮಿನಲ್ 1B ನಲ್ಲಿ ತಪ್ಪಿದ ಭಾರೀ ಅನಾಹುತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1B ನಲ್ಲಿ ಇಂದು ಸಂಜೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಟರ್ಮಿನಲ್‌ನ ನೆಲ ಮಹಡಿಯ ಕೇಬಲ್ ಟ್ರೇ ಹಾಗೂ ಸ್ವಿಚ್ ಬಾಕ್ಸ್‌ಗಳಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು.

ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅದೃಷ್ಟವಶಾತ್ ಬೆಂಕಿ ಕೇವಲ ನೆಲ ಮಹಡಿಗೆ ಸೀಮಿತವಾಗಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.

Must Read