ಪ್ರಯಾಗ್​ರಾಜ್​ ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ: ಸಿಲಿಂಡರ್​​ ಗಳು ಸ್ಫೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್​​ಗಳು ಸ್ಫೋಟಗೊಂಡಿವೆ. ಸದ್ಯ ಯಾವುದೇ ಸಾವು ನೋವು ಸಂಭವಿಸಿಲ್ಲ.

ವಿವೇಕಾನಂದ ಸೇವಾ ಸಮಿತಿಗೆ ಸೇರಿದ 25ಕ್ಕೂ ಹೆಚ್ಚು ಟೆಂಟ್​ಗಳಿಗೆ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಅವಘಡದಿಂದಾಗಿ ಮಹಾ ಕುಂಭಮೇಳ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಸದ್ಯ ಸ್ಥಳಕ್ಕಾಗಮಿಸಿದ 50ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿದ್ದು,​ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

 

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!