ಬೆಂಗಳೂರಿನ ಅಗ್ನಿ ಅವಘಡ: ಹೊತ್ತಿ ಉರಿದ ಸ್ಕ್ರ್ಯಾಪ್ ಗೋದಾಮು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಸ್ಕ್ರ್ಯಾಪ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 5 ಎಕರೆ ಪ್ರದೇಶದ ಗೋದಾಮು ಹೊತ್ತಿ ಉರಿದಿರುವ ಘಟನೆ ಪರಪ್ಪನ ಅಗ್ರಹಾರ ಬಳಿ ನಡೆದಿದೆ.

ಘಟನೆಯಲ್ಲಿ ಎರಡು ಟ್ರ್ಯಾಕ್ಟರ್, ಒಂದು ಟಾಟಾ ಏಸ್, ಬೈಕ್ ಬೆಂಕಿಗಾಹುತಿಯಾಗಿದೆ.

ಮೊದಲು ಗೋದಾಮಿನಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಬಳಿಕ ಬೆಂಕಿ ಇಡೀ ಗೋದಾಮಿಗೆ ಆವರಿಸಿದೆ. 8 ಅಗ್ನಿಶಾಮಕ ತಂಡ ಸ್ಥಳಕ್ಕಾಗಮಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!