ಬೆಂಗಳೂರಿನಲ್ಲಿ ಬೆಂಕಿ ಅವಘಡ: 30 ಲಕ್ಷಕ್ಕೂ ಅಧಿಕ ವಸ್ತುಗಳು ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ.

ಬಳೇಪೇಟೆ ನಗರದ ಪೈಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎರಡು ಅಂತಸ್ತಿನ ಕಟ್ಟಡ ಸುಟ್ಟು ಕರಕಲಾಗಿದೆ. ಬೆಂಕಿಯಿಂದ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿದ್ದು, ವ್ಯಾಪಾರ ಕಳೆದುಕೊಂಡ ಕುಟುಂಬ ಕಣ್ಣೀರು ಹಾಕಿದೆ.

ಬಳೇಪೇಟೆಯ ಪೈಂಟ್ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಎರಡು ಮಹಡಿಗೆ ವ್ಯಾಪಿಸಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮಾಲೀಕ ಕೃಷ್ಣಮೂರ್ತಿ ಕುಟುಂಬದವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. 20 ವರ್ಷಗಳಷ್ಟು ಹಳೆಯದಾದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಕೃಷ್ಣಮೂರ್ತಿ ಹೇಳಿದ್ದಾರೆ.

ಆದರೆ, ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಕಟ್ಟಡದ ಒಳಗೆ ಪ್ರವೇಶಿಸಿ ಅಲ್ಲಿಯೇ ಸಿಲುಕಿದ್ದ ಯುವಕನನ್ನು ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸಿಬ್ಬಂದಿ ನಾಲ್ಕು ಗಂಟೆಗೂ ಹೆಚ್ಚು ಕಾಲ ಶ್ರಮಿಸಿ ಜೆಸಿಬಿ ಬಳಸಿ ಕಟ್ಟಡದ ಶಟರ್ ಒಡೆದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!