ಫ್ರಾನ್ಸ್‌ನಲ್ಲಿ ಅಗ್ನಿ ದುರಂತ: ಐವರು ಮಕ್ಕಳು ಸೇರಿದಂತೆ 10 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫ್ರಾನ್ಸ್‌ನ ಲಿವೋನ್ ಬಳಿಯ ವಾಲ್ಕ್ಸ್-ಎನ್-ವೆಲಿನ್‌ನಲ್ಲಿರುವ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐದು ಮಕ್ಕಳು ಸೇರಿ 10  ಮಂದಿ ಮೃತಪಟ್ಟಿದ್ದಾರೆ.
ಅಗ್ನಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಿದ್ದು, ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎನ್ನಲಾಗಿದೆ. 15 ವರ್ಷಕ್ಕೂ ಕಡಿಮೆ ವಯಸ್ಸಿನ ಐವರು ಮಕ್ಕಳು ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!