ಗುವಾಹಟಿಯಲ್ಲಿ ಬೆಂಕಿ ಅವಘಡ : 150 ಕ್ಕೂ ಹೆಚ್ಚು ಕುಟುಂಬಗಳು ನಿರಾಶ್ರಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಗುವಾಹಟಿ ನಗರದ ಹಟಿಗಾಂವ್ ಪ್ರದೇಶದ ಅಜಂತಾ ಪಥ್‌ನಲ್ಲಿ ಗುರುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಲ್ಲಿ ಹಲವಾರು ವಾಹನಗಳು ಸುಟ್ಟು ಕರಕಲಾಗಿದ್ದು, 100ಕ್ಕೂ ಅಧಿಕ ಮನೆಗಳು ಬೆಂಕಿಗೆ ಆಹುತಿಯಾಗಿವೆ.

ಘಟನೆಯ ಪರಿಣಾಮ 150ಕ್ಕೂ ಹೆಚ್ಚು ಕುಟುಂಬಗಳು ನಿರಾಶ್ರಿತರಾಗಿದ್ದಾರೆ.
ಈವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಮನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ದುರಂತ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ನಡೆದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಆದರೆ ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಬೆಂಕಿ ನಂದಿಸಲು 15ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿತ್ತು. ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿದ್ದು, 15ಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿವೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!