Saturday, February 4, 2023

Latest Posts

ಉತ್ತರ ಪ್ರದೇಶದ ಪಾಧಮ್‌ನಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಫಿರೋಜಾಬಾದ್‌ನ ಪಾಧಮ್ ಪಟ್ಟಣದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ.

ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹೊತ್ತಿದೆ. ನಾಲ್ವರು ಮಕ್ಕಳು ಹಾಗೂ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಪಧಮ್ ಪಟ್ಟಣದ ಮನೆ ಹಾಗೂ ಮಳಿಗೆ ಇರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿದೆ. ನಾಲ್ವರು ಮಕ್ಕಳು ಬೆಂಕಿಗೆ ಆಹುತಿಯಾಗಿದ್ದಾರೆ. ಬೆಂಕಿ ಅತಿಯಾಗಿ ಹರಡಿದ್ದು, ಬೆಂಕಿ ನಂದಿಸಲಾಗಿದೆ. ಕುಟುಂಬದ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಫಿರೋಜಾಬಾದ್ ಎಸ್‌ಪಿ ಆಶಿಶ್ ತಿವಾರಿ ಮಾಹಿತಿ ನೀಡಿದ್ದಾರೆ.

 

ಮನೆಯ ಕೆಳಭಾಗದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣದ ಅಂಗಡಿ ಇತ್ತು. ಇಲ್ಲಿಂದ ಬೆಂಕಿ ಆರಂಭವಾಗಿದೆ. ಬೇರೆ ಕಾರ್ಯಗಳಲ್ಲಿ ಅಗ್ನಿಶಾಮಕ ವಾಹನಗಳು ನಿರತವಾಗಿದ್ದವು. ಆ ಕಾರಣ ಎರಡೂವರೆ ಗಂಟೆ ನಂತರ ರಕ್ಷಣಾ ಕಾರ್ಯ ಆರಂಭವಾಗಿತ್ತು ಎಂದಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದು, ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!