ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುದ್ಧನೌಕೆ ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ಬೆಂಕಿ ಕಾಣಿಸಿಕೊಂಡಾಗಿನಿಂದ ಕಾಣೆಯಾಗಿದ್ದ ನೌಕಾಪಡೆಯ ನಾವಿಕನ ಶವ ಮುಂಬೈ ನೌಕಾ ಹಡಗುಕಟ್ಟೆಯಲ್ಲಿ ಪತ್ತೆಯಾಗಿದೆ .
ತೀವ್ರ ಕಾರ್ಯಾಚರಣೆಯ ಬಳಿಕ ನಾವಿಕ ಸಿತೇಂದ್ರ ಸಿಂಗ್ ಅವರ ಶವ ಇಂದು ಪತ್ತೆಯಾಗಿದೆ ಎಂದು ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಾಲ್ ತಿಳಿಸಿದ್ದಾರೆ.
ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಮತ್ತು ಭಾರತೀಯ ನೌಕಾಪಡೆಯ ಎಲ್ಲಾ ಸಿಬ್ಬಂದಿ ಸಿತೇಂದ್ರ ಸಿಂಗ್ ಅವರ ಕುಟುಂಬಕ್ಕೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ .