ಪಶ್ಚಿಮ ಬಂಗಾಳದಲ್ಲಿ ಅಗ್ನಿ ಅವಘಡ: ಬರೋಬ್ಬರಿ 50 ಅಂಗಡಿಗಳು ಸರ್ವನಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಹೌರಾ ಮಾರ್ಕೆಟ್‌ನಲ್ಲಿ ಭಾರೀ ಅಗ್ನಿ ಅವಘಢ ಸಂಭವಿಸಿದ್ದು, ಬರೋಬ್ಬರಿ ೫೦ ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಹೌರಾ ಮಾರ್ಕೆಟ್‌ನಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿದೆ, ಬೆಂಕಿಯ ಮೂಲದ ಬಗ್ಗೆ ಮಾಹಿತಿ ದೊರಕಿಲ್ಲ. ಬೆಂಕಿ ಇದ್ದಕ್ಕಿದ್ದಂತೆಯೇ ಹರಡಿದ್ದು, ಆಹಾರ ಪದಾರ್ಥಗಳ ಮಹಿಳೆ, ಬಟ್ಟೆ ಅಂಗಡಿಗಳು ಕ್ಷಣಮಾತ್ರದಲ್ಲಿ ಉರಿದು ಹೋಗಿವೆ.

ವಿಷಯ ತಿಳಿದ ನಂತರ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿವೆ. ಈ ಬಗ್ಗೆ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ರಂಜನ್ ಕುಮಾರ್ ಮಾತನಾಡಿದ್ದು, ನಮಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಧಾವಿಸಿದ್ದೇವೆ, ಯಾವುದೇ ಪ್ರಾಣಹಾನಿಯಾಗಿಲ್ಲ. ಆದರೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಬೂದಿಯಾಗಿವೆ ಎಂದಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!