ಹೊಸದಿಗಂತ ವರದಿ ಯಲ್ಲಾಪುರ:
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿಗೆ ಅಗ್ನಿಸ್ಪರ್ಶವಾದ ಘಟನೆ ಮಂಗಳವಾರ ನಸುಕಿನಲ್ಲಿ ಅರಬೈಲ್ ಘಟ್ಟದಲ್ಲಿ ನಡೆದಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಅಲ್ಲಿಗೆ ತೆರಳಿ ಬೆಂಕಿ ಆರಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಲಾರಿ ಚಾಲಕ ಹಾಗೂ ಕ್ಲೀನರ್ ಜೀವಾಪಾಯದಿಂದ ಪಾರಾಗಿದ್ದಾರೆ.
ಈ ಲಾರಿ ಬಾಗಲಕೋಟೆಯಿಂದ ಕೇರಳಕ್ಕೆ ಸಂಚರಿಸುತ್ತಿತ್ತು. ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.
ಬೆಂಕಿ ತಗುಲಿದ ಪರಿಣಾಮ ಲಾರಿಯಲ್ಲಿದ್ದ ಶೇ 70 ಕ್ಕೂ ಅಧಿಕ ಪ್ರಮಾಣದಲ್ಲಿನ ಸಕ್ಕರೆ ಭಸ್ಮವಾಗಿದೆ. ಪಿಎಸ್‌ಐ ಸಿದ್ದಪ್ಪ ಗುಡಿ ಹಾಗೂ ಪೊಲೀಸ್ ಸಿಬ್ಬಂದಿ ಟ್ರಾಫಿಕ್ ಸಮಸ್ಯೆ ಉಂಟಾಗದ0ತೆ ಎಚ್ಚರಿಕೆವಹಿಸಿದರು.