ಹೊಸದಿಗಂತ ವರದಿ,ಮೈಸೂರು:
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಕಾರಿನಲ್ಲಿದ್ದ ವೈದ್ಯರೊಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಮೈಸೂರಿನ ಗನ್ ಹೌಸ್ ವೃತ್ತದ ಬಳಿ ನಡೆದಿದೆ.
ಕುವೆಂಪು ನಗರದ ವೈದ್ಯ ಭೂಷಣ್ ಅವರು ತಮ್ಮ ಐ20 ಕಾರಿನಲ್ಲಿ ಬರುತ್ತಿದ್ದಾಗ, ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವೈದ್ಯರು ತಕ್ಷಣವೇ ಕಾರನ್ನು ನಿಲ್ಲಿಸಿ, ಅದರಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ನೋಡು ನೋಡುತ್ತಿದ್ದಂತೆ ಬೆಂಕಿ ಧಗ, ಧಗನೆ ಹೊತ್ತಿ ಉರಿದು ಕಾರು ಸುಟ್ಟು ಕರಕಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.