ಆಂಧ್ರ ಪ್ರದೇಶದ ಅಗ್ನಿ ಅವಘಡ: ಸುಟ್ಟು ಭಸ್ಮವಾದ 9 ವೋಲ್ವೋ ಬಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಒಂಗೋಲ್ ಪಟ್ಟಣದಲ್ಲಿ ಮಂಗಳವಾರ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ನಿಲ್ಲಿಸಿದ್ದ ಒಂಬತ್ತು ವೋಲ್ವೋ ಬಸ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂಗೋಲ್ ನಗರಾಭಿವೃದ್ಧಿ ಪ್ರಾಧಿಕಾರ (OUDA) ಕಾಂಪ್ಲೆಕ್ಸ್ ಬಳಿ ಖಾಸಗಿ ಟ್ರಾವೆಲ್ ಆಪರೇಟರ್‌ಗಳು ಬಸ್ಸ್ ನಿಲ್ಲಿಸಿದ್ದರು. ಈ ವೇಳೆ ಬಸ್​ಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದಿವೆ. ಈ ಅಗ್ನಿ ಅವಘಡದಿಂದ ಸುಮಾರು 8 ಕೋಟಿ ರೂ. ಹಾನಿಯಾಗಿದೆ ಎಂದು ಅಂದಾಜು ಮಾಡಲಾಗಿದೆ. ಹೊತ್ತಿ ಉರಿದಿರುವ ಬಸ್​​ಗಳು ಕಾವೇರಿ ಟ್ರಾವೆಲ್ಸ್​ಗೆ ಸೇರಿದ್ದವು ಎಂದು ಹೇಳಲಾಗುತ್ತಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಆ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಇತರ 20 ಬಸ್‌ಗಳಿಗೆ ವ್ಯಾಪಿಸುವುದನ್ನು ತಪ್ಪಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಸ್​ಗಳಿಗೆ ಬೆಂಕಿ ತಗುಲುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಈಗಾಗಲೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!