ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮತ್ತು ಗುವಾಹಟಿ ನಡುವಿನ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಂಧ್ರಪ್ರದೇಶದ ಸಿಂಹಾಚಲಂ ಬಳಿ ಈ ಘಟನೆ ನಡೆದಿದೆ.
ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಸ್ವೀಪರ್ ಕೋಚ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕಾರಣ, ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದಾರೆ. ಸಧ್ಯ ಬೆಂಕಿ ನಂದಿಸಲಾಗಿದೆ.
ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.