ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಸಜೀವದಹನವಾಗಿರುವ ಘಟನೆ ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಬುಧವಾರ ರಾತ್ರಿ ಸಂಭವಿಸಿದ ಈ ದುರಂತದಲ್ಲಿ 10 ರಿಂದ 12 ಮಂದಿಗೆ ಗಾಯಗಳಾಗಿದ್ದು, ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೈಪುರದಿಂದ ದೆಹಲಿಗೆ ತೆರಳುತ್ತಿದ್ದ ಬಸ್‌ಗೆ ಗುರುಗ್ರಾಮ್ ಸಿಗ್ನೇಚರ್ ಟವರ್ ಹತ್ತಿರ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಆಗ ಬಸ್‌ನಲ್ಲಿ 40ಪ್ರಯಾಣಕರಿದ್ದರು ಎಂದು ತಿಳಿದುಬಂದಿದೆ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತರುವ ಮುನ್ನವೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು.
ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆ? ಎಂಬುದು ಇನ್ನೂ ತಿಳಿದಿಲ್ಲ. ಸದ್ಯ ಗುರುಗ್ರಾಮ ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯುತ್ತಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.