Wednesday, August 17, 2022

Latest Posts

ಸೌಂದರ್ಯವರ್ಧಕ ಕಾರ್ಖಾನೆಯಲ್ಲಿ ಬೆಂಕಿ: 40 ಕಾರ್ಮಿಕರು ಪ್ರಾಣಾಪಾಯದಿಂದ ಪಾರು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೆಹಲಿಯ ಪ್ರತಾಪ್ ನಗರದ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ೪೦ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮುಂಜಾನೆ ದೆಹಲಿಯ ಪ್ರತಾಪ್ ನಗರದ ಸೌಂದರ್ಯವರ್ಧಕ, ಆಟಿಕೆಗಳು ಮತ್ತು ಬ್ಯಾಗ್ ತಯಾರಿಸುವ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. 40  ಕಾರ್ಮಿಕರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಅಗ್ನಿಶಾಮಕದಳದವರು ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!