ಹೊಸದಿಗಂತ ಡಿಜಿಟಲ್ ಡೆಸ್ಕ್:
ಗರ್ಲ್ಸ್ ಹಾಸ್ಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಾಸ್ಟೆಲ್ ಒಳಗೆ ಸಿಲುಕಿಕೊಂಡಿದ್ದ ಇಬ್ಬರು ಹುಡುಗಿಯರು ಜೀವ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಗ್ರೇಟರ್ ನೋಯ್ಡಾದ ನಾಲೆಡ್ಜ್ ಪಾರ್ಕ್- 3ರಲ್ಲಿರುವ ಅನ್ನಪೂರ್ಣ ಗರ್ಲ್ಸ್ ಹಾಸ್ಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಎಸಿ ಸ್ಫೋಟಗೊಂಡ ಪರಿಣಾಮ ಹಾಸ್ಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಹಾಸ್ಟೆಲ್‌ನ ಎರಡನೇ ಮಹಡಿಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಹುಡುಗಿಯರನ್ನು ಸ್ಥಳೀಯರು ಏಣಿಯ ಸಹಾಯದಿಂದ ರಕ್ಷಿಸಿದರು. ಆದರೆ, ಒಬ್ಬ ಹುಡುಗಿ ಏಣಿಗೆ ಕಾಲಿಡಲು ಪ್ರಯತ್ನಿಸುತ್ತಿದ್ದಾಗ ಕೆಳಕ್ಕೆ ಬಿದ್ದಳು. ಬಿದ್ದ ವಿದ್ಯಾರ್ಥಿನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.