ಹೊಟೇಲ್‌ನಲ್ಲಿ ಬೆಂಕಿ: ಬೆಲೆಬಾಳುವ ವಸ್ತುಗಳು ಭಸ್ಮ

ದಿಗಂತ ವರದಿ ವಿಜಯಪುರ:

ಇಲ್ಲಿನ ರೈಲ್ವೆ ಸ್ಟೇಶನ್ ರಸ್ತೆಯಲ್ಲಿರುವ ಕ್ರೀಯಡ್ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ಬುಧವಾರ ನಡೆದಿದೆ.

ಹೋಟೆಲ್‌ ಕಟ್ಟಡದ ಕೊನೆಯ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಕಿಟಕಿ ಆಚೆಗೆ ಆವರಿಸಿ, ದಟ್ಟ ಹೊಗೆ ಹರಡಿಕೊಂಡಿರುವುದಕ್ಕೆ ಸಾರ್ವಜನಿಕರಲ್ಲಿ ಆತಂಕ ಮೂಡಿಸುವಂತಾಗಿದೆ.
ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಬೆಲೆಬಾಳುವ ವಸ್ತುಗಳು ಭಸ್ಮವಾಗಿವೆ.

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿ, ಬೆಂಕಿ ನಂದಿಸಲು ಮುಂದಾದರು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!