July 25, 2026
Saturday, July 25, 2026
spot_img

ಲಕ್ನೋನಲ್ಲಿ ಅಗ್ನಿ ತಾಂಡವ | ಬ್ಲಾಸ್ಟ್ ಆಯ್ತು 100 ಗ್ಯಾಸ್ ಸಿಲಿಂಡರ್‌‌ಗಳು: 1,200ಕ್ಕೂ ಹೆಚ್ಚು ಗುಡಿಸಲು ಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಕ್ನೋ ನಗರದ ವಿಕಾಸ್ ನಗರ ಸೆಕ್ಟರ್ 12ರ ರಿಂಗ್ ರಸ್ತೆಯ ಪಕ್ಕದಲ್ಲಿರುವ ಕೊಳಗೇರಿ ಪ್ರದೇಶದಲ್ಲಿ ಬುಧವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಕ್ಕೂ ಹೆಚ್ಚು ಗುಡಿಸಲುಗಳು ಕ್ಷಣಾರ್ಧದಲ್ಲಿ ಬೆಂಕಿಗೆ ಆಹುತಿಯಾಗಿವೆ.

ಸುಮಾರು ಮೂರು ಎಕರೆ ವ್ಯಾಪ್ತಿಯ ಈ ಪ್ರದೇಶದಲ್ಲಿ 200ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದವು, ಬೆಂಕಿ ವೇಗವಾಗಿ ಹರಡಿದ ಪರಿಣಾಮ 1,200ಕ್ಕೂ ಹೆಚ್ಚು ಗುಡಿಸಲುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ ತಕ್ಷಣ 22 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ರಾತ್ರಿವರೆಗೂ ನಿರಂತರವಾಗಿ ಬೆಂಕಿ ನಂದಿಸುವ ಕಾರ್ಯ ನಡೆಸಿದವು.

ಘಟನಾ ಸ್ಥಳದಲ್ಲಿ ಸಂಗ್ರಹಿಸಿದ್ದ ಎಲ್‌ಪಿಜಿ ಸಿಲಿಂಡರ್‌ಗಳು ಸರಣಿ ಸ್ಫೋಟಗೊಂಡ ಪರಿಣಾಮ ಭಾರಿ ಆತಂಕ ಉಂಟಾಯಿತು. ಸ್ಫೋಟದ ಶಬ್ದದಿಂದ ಇಡೀ ಪ್ರದೇಶ ನಡುಗಿದ್ದು, ದಟ್ಟ ಕಪ್ಪು ಹೊಗೆ ಆವರಿಸಿತ್ತು.

ಇದನ್ನೂ ಓದಿ:

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಳಗೇರಿಯೊಳಗಿನ ಒಂದು ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಲವಾದ ಗಾಳಿಯಿಂದ ಅದು ಕ್ಷಣಾರ್ಧದಲ್ಲಿ ಇಡೀ ಪ್ರದೇಶಕ್ಕೆ ವ್ಯಾಪಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹತ್ತಿರದ ಸುಮಾರು 30 ಮನೆಗಳನ್ನು ಖಾಲಿ ಮಾಡಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲವಾದರೂ, ಕೆಲವು ಮಕ್ಕಳು ಕಾಣೆಯಾಗಿರುವ ಶಂಕೆಯಿಂದ ಶೋಧ ಕಾರ್ಯ ಮುಂದುವರಿದಿದೆ.

ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸ್ಥಳಕ್ಕೆ ಭೇಟಿ ನೀಡಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ತಾತ್ಕಾಲಿಕ ಆಶ್ರಯ, ಆಹಾರ ಮತ್ತು ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ. ಬೆಂಕಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !