Saturday, February 24, 2024

ಮುಂಬೈ ಏರ್ ಪೋರ್ಟ್ ನಲ್ಲಿ ವಿಮಾನದ ಪುಶ್​​ಬ್ಯಾಕ್ ವಾಹನಕ್ಕೆ ಬೆಂಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ವಿಮಾನಕ್ಕೆ ಪುಶ್​​ಬ್ಯಾಕ್​ ನೀಡುತ್ತಿದ್ದ ವಾಹನ ವಿಮಾನದ ಬಳಿಯೇ ಹೊತ್ತಿ ಉರಿದಿದ್ದು, ದೊಡ್ಡ ದುರಂತವೇ ತಪ್ಪಿದೆ.
ಇಂದು ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು 10 ನಿಮಿಷದಲ್ಲಿ ಬೆಂಕಿ ಹತೋಟಿಗೆ ತಂದಿದ್ದಾರೆ.
ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೇ ರೀತಿಯ ಗಾಯ ಅಥವಾ ಪ್ರಾಣಹಾನಿ ಆಗಿಲ್ಲ.
ಈ ಏರ್​ ಇಂಡಿಯಾ ವಿಮಾನ ಮುಂಬೈನಿಂದ ಗುಜರಾತ್‌ನ ಜಾಮ್​ನಗರಕ್ಕೆ ತೆರಳುತ್ತಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!