ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷನ್(23) ಮೃತ ಕಾರ್ಮಿಕರು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಗುತ್ತಿಗೆದಾರ ಮತ್ತು ಇಂಜಿನಿಯರ್ ಸತೀಶ್ಗೆ ಸೇರಿದ ಶಿವಾನಿ ಗ್ರೀನ್ ಲೇಔಟ್ನಲ್ಲಿರುವ 3 ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದೆ. ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ವುಡ್ ವರ್ಕ್ಸ್ ಕೆಲಸ ಮಾಡಲಾಗುತ್ತಿತ್ತು. ಮರ ಫಾಲೀಷ್ ಮಾಡಲು ಥಿನ್ನರ್ ಬಳಕೆ ಮಾಡಲಾಗಿದೆ. ಕೆಮಿಕಲ್ ಕೂಡ ಸಮೀದಲ್ಲೇ ಶೇಕರಣೆ ಮಾಡಲಾಗಿತ್ತು. ಈ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದೆ. ನೀರಿನ ಟ್ಯಾಂಕರ್ ಮೇಲೆ ಕುಳಿತುಕೊಂಡುದ್ದ ಕಾರ್ಮಿಕನೊಬ್ಬನ ರಕ್ಷಣೆ ಮಾಡಲಾಗಿದೆ.