ಹೊಸದಿಗಂತ ಡಿಜಿಟಲ್ ಡೆಸ್ಕ್;
ಪ್ರಯಾಗ್ ರಾಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕುಠೀರಗಳು ಹೊತ್ತಿ ಉರಿಯುತ್ತಿವೆ.
ಪ್ರಯಾಗ್ ರಾಜ್ ನ ಸೆಕ್ಟರ್ 18, 19ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಡೇರೆಗಳು ಹೊತ್ತಿ ಉರಿಯುತ್ತಿರುವುದಾಗಿ ತಿಳಿದು ಬಂದಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾವೆ. ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.