ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಆರ್ಟಿ ನಗರದಲ್ಲಿರುವ ಮಿರಾಕಲ್ ಡ್ರೀಮ್ಸ್ ಕಟ್ಟಡದ ನೆಲ ಮಹಡಿಯಲ್ಲಿರುವ ಜನರೇಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ನೋಡನೋಡುತ್ತಿದ್ದಂತೆ ಮೂರು ಮಹಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
ಕಟ್ಟಡದ ಮೇಲಿನ ಮಹಡಿಯಲ್ಲಿ ಅನೇಕ ಜನರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಆರ್ ಟಿ ನಗರ ಪೊಲೀಸರು ಕಟ್ಟಡದಲ್ಲಿ ಸಿಲುಕಿದ್ದ ಏಳು ಮಂದಿಯನ್ನು ರಕ್ಷಿಸಿ ಹೊರ ತಂದಿದ್ದಾರೆ. ಕಟ್ಟಡದ ಕಿಟಕಿ ಒಡೆದಿದ್ದು, ಅಕ್ಕಪಕ್ಕದ ಕಟ್ಟಡದಿಂದ ಏಣಿಯನ್ನು ಬಳಸಿ ರಕ್ಷಣೆ ಮಾಡಲಾಗಿದೆ. ಹತ್ತಕ್ಕೂ ಹೆಚ್ಚು ಮಂದಿ ಕಟ್ಟಡದ ಮೇಲ್ಛಾವಣಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.
ದಟ್ಟ ಹೊಗೆ ಕಟ್ಟಡವನ್ನು ಆವರಿಸಿದ್ದು. ಇನ್ನೆರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ರಸ್ತೆಯಲ್ಲಿ ನೂರಾರು ಜನ ಜಮಾಯಿಸಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.