ಹೊಸದಿಗಂತ ಡಿಜಿಟಲ್ ಡೆಸ್ಕ್:
ಶನಿವಾರ ಸಂಜೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗೇಮಿಂಗ್ ಏರಿಯಾದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ನಂದಿಸಲು ಪ್ರಯತ್ನ ನಡೆಸಲಾಗುತ್ತಿದೆ. ವರದಿ ಪ್ರಕಾರ, ತಾತ್ಕಾಲಿಕ ಕಟ್ಟಡದ ಕುಸಿತ ಮತ್ತು ಗಾಳಿಯ ವೇಗದಿಂದ ಬೆಂಕಿಯನ್ನು ನಂದಿಸಲು ನಾವು ತೊಂದರೆಗಳನ್ನು ಎದುರಿಸಿದ್ದೇವೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.