ಭಾರತ್ ಬಯೋಟೆಕ್‌ನ ಕೋವಿಡ್ ಲಸಿಕೆ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆ ತಯಾರಕಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಹೈದರಾಬಾದ್‌ನ ಹೊರವಲಯದ ಶಮೀರ್‌ಪೇಟೆ ಬಳಿಯ ಜಿನೋಮ್ ವ್ಯಾಲಿಯಲ್ಲಿರುವ ಘಟಕದಲ್ಲಿ ಈ ಘಟನೆ ಸಂಭವಿಸಿದ್ದು, ಅಡುಗೆ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ ಅದೃಷ್ಟವಶಾತ್ ಘಟಕದ ಮುಖ್ಯ ಕೇಂದ್ರ ಸುಮಾರು 300 ಮೀಟರ್ ದೂರದಲ್ಲಿರುವುದರಿಂದ ಯಾವುದೇ ಹಾನಿ ಉಂಟಾಗಿಲ್ಲ. ಅಗ್ನಿಶಾಮಕ ದಳದ ಮಿಂಚಿನ ಕಾರ್ಯಾಚರಣೆಯಲ್ಲಿ ಬೆಂಕಿ ನಂದಿಸಲಾಗಿದೆ. ಅನಿಲ ಸೋರಿಕೆಯಿಂದ ಬೆಂಕಿ ವ್ಯಾಪಿಸಿರಬಹುದು ಎಂದು ಶಂಕಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!