ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ಅಂಗಡಿ ಅಗ್ನಿ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.
ಅತ್ತಿಬೆಲೆ ಗಡಿಯಲ್ಲಿನ ಬಾಲಾಜಿ ಕ್ರಾಕರ್ಸ್ ಎಂಬ ಪಟಾಕಿ ಮಳಿಗೆಯಲ್ಲಿ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಕಿಡಿಯಿಂದ ಇಡೀ ಅಂಗಡಿ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಂಗಡಿಯಲ್ಲಿ 20 ಮಂದಿ ಕಾರ್ಮಿಕರು ಇದ್ದರು. ನವೀನ್ ಎಂಬುವರಿಗೆ ಸೇರಿದ ಬಾಲಾಜಿ ಕ್ರಾಕರ್ಸ್ ಎಂಬ ಪಟಾಕಿ ಅಂಗಡಿ ಇದಾಗಿದೆ ಎಂದು ತಿಳಿದುಬಂದಿದೆ.
ಒಂದು ಕ್ಯಾಂಟರ್, ಎರಡು ಬೋಲೇರೋ, ನಾಲ್ಕು ಬೈಕ್ ಸುಟ್ಟು ಹೋಗಿವೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅಗ್ನಿ ಅವಘಡದಲ್ಲಿ ಮೃತ ದೇಹಗಳು ಸುಟ್ಟು ಕರಕಲಾಗಿವೆ. ಅವಶೇಷಗಳ ಅಡಿ ಸಿಲುಕಿದ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸ ನಡೆಸಲಾಗಿದೆ.