ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್‌ನ ಜಿಯಾಗುಡಾದಲ್ಲಿರುವ ಪೀಠೋಪಕರಣ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಹೈದರಾಬಾದ್‌ನ ಅಗ್ನಿಶಾಮಕ ನಿಯಂತ್ರಣ ಕೊಠಡಿಯ ಪ್ರಕಾರ, 4 ಅಂತಸ್ತಿನ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ, ಬೆಳಗಿನ ಜಾವ 1.22 ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಾಗ 21 ಜನರು ಇದ್ದರು ಎನ್ನಲಾಗಿದೆ.
ಅಗ್ನಿಶಾಮಕ ದಳದ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಆವರಣದಿಂದ ಹಲವರನ್ನು ರಕ್ಷಿಸಿದ್ದಾರೆ. ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಅಂತಿಮವಾಗಿ ಬೆಂಕಿಯನ್ನು ಹತೋಟಿಗೆ ತರಲಾಯಿತು.
“ನಮ್ಮ ತಂಡವು ಹಲವಾರು ಜನರನ್ನು ರಕ್ಷಿಸಿದೆ, ಆದರೆ ದುರದೃಷ್ಟವಶಾತ್, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಬೆಂಕಿಯ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ, ಆದರೆ ಪ್ರಕರಣವನ್ನು ದಾಖಲಿಸಲಾಗಿದೆ, ಮತ್ತು ತನಿಖೆ ನಡೆಯುತ್ತಿದೆ’ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದರು.