ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಹೌರಾದಲ್ಲಿ ಮನೆಗೆ ಬೆಂಕಿ ತಗುಲಿ ಮೂವರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌರಾದ ಉಲುಬೇರಿಯಾ ಪಟ್ಟಣದಲ್ಲಿ ಕಾಳಿ ಪೂಜೆ ವೇಳೆ ಸಂಭವಿಸಿದ ಬೆಂಕಿಯಲ್ಲಿ 9, 14 ಮತ್ತು ಎರಡೂವರೆ ವರ್ಷದ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಹೊತ್ತಿಕೊಂಡ ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದರು. ಈ ವೇಳೆ ಮೂವರು ಮಕ್ಕಳು ಬೆಂಕಿಗೆ ಆಹುತಿಯಾಗಿದ್ದಾರೆ. ಬೆಂಕಿಯನ್ನು ನಂದಿಸಿದ ನಂತರ, ಅಗ್ನಿಶಾಮಕ ದಳದವರು ಮೂವರು ಮಕ್ಕಳ ಸುಟ್ಟ ದೇಹಗಳನ್ನು ಹೊರತೆಗೆದರು. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.