ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಐಟಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಓರ್ವನಿಗೆ ಗಂಭೀರ ಗಾಯವಾಗಿದೆ.
ದೆಹಲಿಯ ಹಳೇ ಪೊಲೀಸ್ ಹೆಡ್ ಕ್ವಾರ್ಟರ್ಸ್ ಎದುರು ಇರುವ ಐಟಿ ಕಚೇರಿಯ ನಾಲ್ಕನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಕಟ್ಟಡದ ಒಳಗೆ ಸಿಲುಕಿದ್ದ 7 ಜನರನ್ನು ರಕ್ಷಿಸಲಾಗಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.