ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಕೋಟಾದಲ್ಲಿರುವ ಹಾಸ್ಟೆಲ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ತಮ್ಮ ಪ್ರಾಣ ಉಳಿಸಿಕೊಳ್ಳಲು ಕಟ್ಟಡಗಳಿಂದ ಜಿಗಿಯುವಾಗ ಮೂಳೆ ಮುರಿದುಕೊಂಡಿದ್ದಾರೆ. ಭಾನುವಾರ ಬೆಳಗ್ಗೆ 6 ಗಂಟೆಗೆ ಕೋಟಾದ ಹಾಸ್ಟೆಲ್‌ನಲ್ಲಿ ಟ್ರಾನ್ಸ್‌ಫಾರ್ಮರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಘಟನೆ ನಡೆದಾಗ ಆರು ಅಂತಸ್ತಿನ ವಸತಿ ನಿಲಯದಲ್ಲಿ 70 ವಿದ್ಯಾರ್ಥಿಗಳಿದ್ದರು. ಬೆಳಗ್ಗೆ ಬಹುತೇಕ ವಿದ್ಯಾರ್ಥಿಗಳು ಗಾಢ ನಿದ್ದೆಯಲ್ಲಿದ್ದರು. ಗದ್ದಲ ಉಂಟಾದಾಗ ವಿದ್ಯಾರ್ಥಿಗಳು ಗಾಬರಿಗೊಂಡು ನೂಕುನುಗ್ಗಲು ಉಂಟಾಯಿತು. ಅಪಘಾತದಲ್ಲಿ 7 ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಮೊದಲ ಮಹಡಿಯಲ್ಲಿದ್ದ ಕೆಲವು ವಿದ್ಯಾರ್ಥಿಗಳು ಬಾಲ್ಕನಿಗೆ ಶೀಟ್‌ಗಳನ್ನು ಕಟ್ಟಿ ಕೆಳಗೆ ಇಳಿಯಲು ಯತ್ನಿಸಿದ್ದಾರೆ.
ಪಾಲಿಕೆಯ ಅಗ್ನಿಶಾಮಕ ದಳದ ಸಿಬ್ಬಂದಿ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದರು. ನಂತರ ಎಲ್ಲಾ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಗಾಗಿ ಎಂಬಿಎಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ನಗರ ಎಸ್ಪಿ ಡಾ.ಅಮೃತಾ ದುಹಾನ್ ಸೇರಿದಂತೆ ಹಲವು ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದರು.