ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಶನಿವಾರ ಮಧ್ಯಾಹ್ನ 3.30ಕ್ಕೆ ಲಾರಿಯಿಂದ ಪಟಾಕಿ ಇಳಿಸಲಾಗುತ್ತಿತ್ತು. ಈ ವೇಳೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದುರಂತ ಸಂಭವಿಸಿದೆ. ಶನಿವಾರ ತಡರಾತ್ರಿವರೆಗೆ ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಮೃತಪಟ್ಟ ಕಾರ್ಮಿಕರ ಪೈಕಿ ಬಹುತೇಕರು ತಮಿಳುನಾಡಿನ ಶಿವಕಾಶಿ ಮೂಲದವರು ಎಂದು ತಿಳಿದು ಬಂದಿದೆ.
ಗೋದಾಮು ಮಾಲೀಕನ ಪುತ್ರ ನವೀನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ.
ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338, 304, 337, 338, 9 (ಬಿ) ಸ್ಪೋಟಕ ವಸ್ತು ಅಡಿ ಪ್ರಕರಣ ದಾಖಲಾಗಿದೆ.