Wednesday, February 21, 2024

ಮಹಾರಾಷ್ಟ್ರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, ಓರ್ವ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಕೆಮಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ಕಾರ್ಮಿಕ ಸುಟ್ಟು ಭಸ್ಮವಾಗಿದ್ದಾರೆ.

ಬದ್ಲಾಪುರದ ಎಂಐಡಿಸಿಯಲ್ಲಿರುವ ಕಾರ್ಖಾನೆ ಏಕಾಏಕಿ ಹೊತ್ತಿ ಉರಿದಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ. ಬೆಂಕಿಯ ತೀವ್ರತೆಯಿಂದಾಗಿ ಫ್ಯಾಕ್ಟರಿ ಸಮೀಪದ ವಾಹನಗಳಿಗೂ ಬೆಂಕಿ ತಗುಲಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ. ಬೆಂಕಿ ಹೊತ್ತಲು ಕಾರಣ ಏನು ಎಂದು ತಿಳಿದುಬಂದಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!