ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಆರು ಮಂದಿ ಮೃತಪಟ್ಟಿದ್ದಾರೆ.
ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹೋಟೆಲ್‌ನಲ್ಲಿ ಅಗ್ನಿ ಅಪಘಾತ ನಡೆದಿದೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದು, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ.
ನಾವು ಬೆಂಕಿಯನ್ನು ಹತೋಟಿಗೆ ತಂದಿದ್ದೇವೆ, ಅದರ ಬಗ್ಗೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಾಹಿತಿ ಬಂದಿತು. ಸರಿಯಾದ ತನಿಖೆಯ ಮೂಲಕ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದು ಮತ್ತು ಸೂಕ್ತ ಕ್ರಮವನ್ನು ಅನುಸರಿಸಲಾಗುವುದು ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ.
ಕಟ್ಟಡದ ಮುಂಭಾಗದಲ್ಲಿರುವ ಸೇತುವೆ ಮೇಲೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಟೇಷನ್ ರಸ್ತೆಯೂ ಸಂಪೂರ್ಣ ಬಂದ್ ಆಗಿದೆ.