ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ, ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ನರೇಲಾ ಕೈಗಾರಿಕಾ ಘಟಕದ ಬಳಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಈವರೆಗೂ ಮೂವರನ್ನು ರಕ್ಷಿಸಲಾಗಿದ್ದು, ಕಟ್ಟಡದೊಳಗೆ ಇನ್ನೂ ಕೆಲವರು ಇರುವ ಶಂಕೆ ಇದೆ. ಕಟ್ಟಡದೊಳಗಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹತ್ತು ಅಗ್ನಿಶಾಮಕದಳ ವಾಹನಗಳು ಸ್ಥಳಕ್ಕೆ ದಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!