March 27, 2026
Friday, March 27, 2026
spot_img

ಚಿಕ್ಕಪೇಟೆ ಮೆಟ್ರೋ ಸ್ಟೇಷನ್‌ ಬಳಿ ಅಗ್ನಿ ಅವಘಡ: 20 ಅಂಗಡಿಗಳಿದ್ದ ಬಿಲ್ಡಿಂಗ್‌ಗೆ ಬೆಂಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಶಾರ್ಟ್‌ ಸರ್ಕೀಟ್‌ನಿಂದಾಗಿ ದೊಡ್ಡ ಬಿಲ್ಡಿಂಗ್‌ ಒಂದರಲ್ಲಿ ಬೆಂಕಿ ಕಾಣಿಸಿದೆ.

ಬೆಳಗ್ಗೆ ಏಳು ಗಂಟೆ ಸುಮಾರಿಗೆ ಫ್ಯಾನ್ಸಿ ಸ್ಟೋರ್‌ ಒಂದರಲ್ಲಿ ಬೆಂಕಿ ಕಾಣಿಸಿದೆ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಅಂಗಡಿಯ ಒಳಕ್ಕೆ ಹೋಗಿ ಬೆಂಕಿ ನಂದಿಸಿದ್ದಾರೆ. ಒಂದು ಗಂಟೆಯಿಂದ ಕಾರ್ಯಾಚರಣೆ ನಡೆಯುತ್ತಲೇ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !