January20, 2026
Tuesday, January 20, 2026
spot_img

ಇಸ್ಕಾನ್ ದೇವಾಲಯದ ಸ್ಕೈವಾಕ್ ಬಳಿ ಬೆಂಕಿ: ತಪ್ಪಿದ ಭಾರಿ ಅನಾಹುತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಪ್ರಮುಖ ಧಾರ್ಮಿಕ ತಾಣಗಳಲ್ಲಿ ಒಂದಾದ ಇಸ್ಕಾನ್ ದೇವಾಲಯದ ಸಮೀಪದ ಸ್ಕೈವಾಕ್ ಬಳಿ ಸೋಮವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಸ್ಕೈವಾಕ್ ಮೇಲೆ ಅಳವಡಿಸಲಾಗಿದ್ದ ಜಾಹೀರಾತು ಬ್ಯಾನರ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು. ವೇಗವಾಗಿ ಕಾರ್ಯನಿರ್ವಹಿಸಿದ ಪರಿಣಾಮ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ವರದಿ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಜಾಹೀರಾತು ಬ್ಯಾನರ್‌ಗೆ ಅಳವಡಿಸಿದ್ದ ವಿದ್ಯುತ್ ಲೈಟ್‌ಗಳಿಂದ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿ ಬೆಂಕಿ ಉಂಟಾಗಿರಬಹುದೆಂದು ಶಂಕಿಸಲಾಗಿದೆ. ಆದರೆ, ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಈ ಸಂಬಂಧ ಅಧಿಕಾರಿಗಳು ಹೆಚ್ಚಿನ ತನಿಖೆ ಆರಂಭಿಸಿದ್ದು, ಸುರಕ್ಷತಾ ಕ್ರಮಗಳ ಪರಿಶೀಲನೆಗೂ ಮುಂದಾಗಿದ್ದಾರೆ.

Must Read