Sunday, April 18, 2021

Latest Posts

ಸ್ಟೇಷನ್ ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ: ಹೊತ್ತಿ ಉರಿದ ಬೋಗಿಗಳು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಹರಿಯಾಣದ ರೋಹ್ತಕ್​​ ರೈಲು ನಿಲ್ದಾಣದಲ್ಲಿ ನಿಲ್ಲಿಸಿದ್ದ ರೈಲು ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ರೈಲಿನ ಮೂರು ಬೋಗಿಗಳು ಸುಟ್ಟು ಕರಕಲಾಗಿವೆ.
ದುರ್ಘಟನೆಗೊಳಗಾದ ರೈಲು ರೋಹ್ತಕ್​ನಿಂದ ದೆಹಲಿಗೆ ತೆರಳುತ್ತಿತ್ತು.ಈ ಅವಘಡದ ಸಮಯದಲ್ಲಿ ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಅಗ್ನಿ ಶಮನಕ್ಕೆ ಹರಸಾಹಸಪಟ್ಟರು.
ರೈಲು ರೋಹತಕ್​ನಿಂದ ದೆಹಲಿಗೆ ಸಂಜೆ 4.10 ಕ್ಕೆ ಹೊರಡಬೇಕಾಗಿತ್ತು. ಶಾರ್ಟ್ ಸರ್ಕ್ಯೂಟ್​​​ನಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss