ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಫ್ಲೈ ಓವರ್ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮುಗಿಲೆತ್ತರದವರೆಗೆ ಹರಡಿದ ದಟ್ಟ ಹೊಗೆಗೆ ಸ್ಥಳೀಯರು ಮತ್ತು ಅಕ್ಕಪಕ್ಕದ ನಿವಾಸಿಗಳು ಭಯಭೀತರಾಗಿದ್ದಾರೆ.
ಬೆಂಕಿ ರೌದ್ರನರ್ತನಕ್ಕೆ ಫ್ಲೈ ಓವರ್ ಬಳಿಯ ಕಾಗದ, ಪ್ಲಾಸ್ಟಿಕ್ ವಸ್ತುಗಳು, ಗೋಣಿಚೀಲ, ಪ್ಲಾಸ್ಟಿಕ್ ಪೈಪ್ಗಳು ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ರಣ ಬಿಸಿಲಲ್ಲಿ ಬೆಂಕಿಯ ನರ್ತನ ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ.
ಬೆಂಕಿ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅಷ್ಟರೊಳಗೆ ಬೆಂಕಿ ಕೆನ್ನಾಲಿಗೆಗೆ ತ್ಯಾಜ್ಯ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿದ್ದವು.