ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ಕತ್ರಾದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ದಿಡೀರ್ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿದ್ದಾರೆ.
ಕತ್ರಾದಿಂದ ಜಮ್ಮುವಿಗೆ ಬಸ್ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಬಸ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಬಸ್ಗೆ ಆವರಿಸಿಕೊಂಡಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿದ್ದಾರೆ.
ಕತ್ರಾದ ಮಾತಾ ವೈಷ್ಣೋ ದೇವಿಗೆ ಇವರೆಲ್ಲರೂ ತೆರಳುತ್ತಿದ್ದರು. ಘಟನಾ ಸ್ಥಳಕ್ಕೆ ತೆರಳಿರುವ ಅಗ್ನಿಶಾಮಕ ದಳ, ಮೃತ ಪ್ರಯಾಣಿಕರ ದೇಹಗಳನ್ನ ಹೊರತೆಗೆದಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದಿದ್ದಾರೆ.