March 12, 2026
Thursday, March 12, 2026
spot_img

ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ: 7 ಕಾರ್ಮಿಕರ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಭಿವಾಡಿ ಸಮೀಪದ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಏಳು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರ್ಖಾನೆಯೊಳಗಿದ್ದ ಕಾರ್ಮಿಕರಲ್ಲಿ ಕೆಲವರು ತಾವಾಗಿಯೇ ಹೊರಬಂದರೂ, ಹಲವರು ಒಳಗೆ ಸಿಲುಕಿಕೊಂಡಿದ್ದರು. ರಕ್ಷಣಾ ಸಿಬ್ಬಂದಿ ಒಳನುಗ್ಗಿ ಏಳು ಮಂದಿಯ ಶವಗಳನ್ನು ಹೊರತೆಗೆದಿದ್ದಾರೆ. ಅವಘಡದ ವೇಳೆ ಸುಮಾರು 20ರಿಂದ 25 ಕಾರ್ಮಿಕರು ಕೆಲಸದಲ್ಲಿದ್ದರೆಂದು ತಿಳಿದುಬಂದಿದೆ.

ಇದನ್ನೂ ಓದಿ:

ಘಟನೆಯ ಮಾಹಿತಿ ಸಿಕ್ಕ ಕೂಡಲೇ ತಿಜಾರಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಅಗ್ನಿಶಾಮಕ ದಳದ ವಾಹನಗಳನ್ನು ಕಳುಹಿಸಲಾಯಿತು. ಸುಮಾರು ಒಂದೂವರೆ ಗಂಟೆಗಳ ಹೋರಾಟದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಅಧಿಕಾರಿಗಳು ಯಶಸ್ವಿಯಾದರು. ಬಳಿಕ ಸಂಪೂರ್ಣ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು.

ಅಗ್ನಿ ಅವಘಡದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಈ ದುರಂತ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೈಗಾರಿಕಾ ಭದ್ರತೆ ಕುರಿತು ಮತ್ತೆ ಪ್ರಶ್ನೆಗಳು ಉದ್ಭವಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !