ಗುಜರಿ ಅಂಗಡಿಯಲ್ಲಿ ಅಗ್ನಿ ದುರಂತ: ವೆಸ್ಟೇಜ್ ಎಲ್ಲವೂ ಬೆಂಕಿಗಾಹುತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ಗುಜರಿ ಅಂಗಡಿಯೊಂದಕ್ಕೆ ಬೆಳಗಿನ ಜಾವ ಬೆಂಕಿ ತಗುಲಿ ವಸ್ತುಗಳೆಲ್ಲ ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಸಮೀಪದ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ.

ಇಂದು ಮುಂಜಾನೆ 5:30ರ ಸುಮಾರಿಗೆ ಗಂಗೊಂಡನಹಳ್ಳಿಯ ಗುಜರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ದಟ್ಟವಾದ ಹೊಗೆಯನ್ನು ಸೃಷ್ಟಿಸಿತು, ಕೂಡಲೇ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿಗೆ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಗುಜರಿ ಅಂಗಡಿಯಲ್ಲಿದ್ದ ವೆಸ್ಟೇಜ್ ಎಲ್ಲವೂ ಸುಟ್ಟು ಕರಕಲಾಗಿವೆ. ಆದರೆ ಪೊಲೀಸ್ ತನಿಖೆಯಿಂದ ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ಲಭ್ಯವಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!